ವಿದ್ಯೆ ಬುದ್ದಿ ಕಲಿಸಿದ ಗುರುವಿಗೆ ಶಿಕ್ಷಕರ ದಿನದ ಶುಭಾಷಯಗಳು.😍💐🙏
#ವಿದ್ಯೆ_ಬುದ್ದಿ_ಕಲಿಸಿದ_ಗುರುವಿಗೆ_ಶಿಕ್ಷಕರ_ದಿನದ_ಶುಭಾಷಯಗಳು...💐💐🙏🏼🙏🏼
ಭಾರತದಲ್ಲಿ ಗುರು ಶಿಷ್ಯರ ಪರಂಪರೆಯ ದೊಡ್ಡ ಪಟ್ಟಿಯೇ ಇದೆ. ಯಮಧರ್ಮ-ನಚೀಕೇತ, ದ್ರೋಣಾಚಾರ್ಯ- ಆರ್ಜುನ, ಕೃಷ್ಣ-ಅರ್ಜುನ, ಚಾಣಕ್ಯ- ಚಂದ್ರಗುಪ್ತ, ರಾಮಕೃಷ್ಣ ಪರಮಹಂಸ-ಸ್ವಾಮಿ ವಿವೇಕಾನಂದ, ಗೋಪಾಲಕೃಷ್ಣಗೋಖಲೆ-ಮಹಾತ್ಮ ಗಾಂಧಿ, ಟಿ.ಎಸ್. ವೆಂಕಣ್ಣಯ್ಯ-ಕುವೆಂಪು ಹೀಗೆ ಪಟ್ಟಿ ಬೆಳೆಯುತ್ತಾ ಹೋಗುತ್ತದೆ. 'ತಾಯಿಯೇ ಮೊದಲ ಗುರು' ಎನ್ನುತ್ತಾರೆ. ಇದು ನಿಜ ಕೂಡ. ಮಗುವಿಗೆ ಮೊದಲು ಕೇಳಿಸುವುದು ತನ್ನಮ್ಮನ ಮಾತುಗಳೇ. ತಾಯಿಯಾದವಳು ಮಕ್ಕಳನ್ನು ಸನ್ಮಾರ್ಗದಲ್ಲಿ ಬೆಳೆಸಿದರೆ ಗುರುವಿನ ಕೆಲಸಕ್ಕೆ ಸಹಕಾರಿಯಾಗುತ್ತದೆ. ತಾಯಿಯ ಮಮತೆಯನ್ನು, ತಂದೆಯಂತೆ ಜವಾಬ್ದಾರಿಯಿಂದ ಪೋಷಣೆ ಮಾಡಬಲ್ಲವನೇ ನಿಜವಾದ ಗುರು. ಗುರುವಾದವನು ತನ್ನ ಶಿಷ್ಯನಿಗೆ ತಂದೆ-ತಾಯಿ ಎರಡೂ ಆಗಬಲ್ಲ. ಒಳ್ಳೆಯ ಮಾರ್ಗದಲ್ಲಿ ನಡೆಯುವವರು, ನಡೆದವರು,ನಡೆಯಬಯಸುವವರು ಇನ್ನಾದರೂ ತಮ್ಮ ಮಾರ್ಗದರ್ಶಕರನ್ನು ಮರೆಯದೇ ನೆನಪಿಸಿಕೊಳ್ಳುವುದು ಅಗತ್ಯ.
ಶಿಷ್ಯರ ಏಳಿಗೆಯನ್ನು ಸದಾ ಬಯಸುವ ಗುರುಗಳನ್ನು ಒಮ್ಮೆಯೂ ನೆನಪಿಸಿಕೊಳ್ಳದವನು ಮನುಷ್ಯನೇ ಅಲ್ಲಾ ಬಿಡಿ.ಭಾರತದಲ್ಲಿ ಗುರುವನ್ನು ನೆನಪಿಕೊಳ್ಳುವಂತೆ ಮಾಡಿದ ಕೀರ್ತಿ ರಾಷ್ಟ್ರಾಧ್ಯಕ್ಷರಾಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣರಿಗೆ ಸಲ್ಲುತ್ತದೆ. ಉದಾರ ಮನೋಭಾವನೆಯಿಂದ ತಾವು ಹುಟ್ಟಿದ ದಿನವನ್ನು (ಸೆಪ್ಟೆಂಬರ್ 5) ಶಿಕ್ಷಕರ ದಿನವೆಂದು ಆಚರಿಸಲು ತಮ್ಮ ಶಿಷ್ಯ ವೃಂದಕ್ಕೆ ಕರೆಯನ್ನಿತ್ತರು.ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಮ್ ರವರು ಕೂಡ ತಮ್ಮ ಗುರುವಾದ ಶಿವಶಂಕರ್ ಅಯ್ಯರ್ ಅವರನ್ನು ನೆನಪಿಕೊಳ್ಳದ ವೇದಿಕೆ ಇಲ್ಲವೆನ್ನಬಹುದು. ತಾವು ಹೋದೆಡೆಯೆಲ್ಲ ಮಕ್ಕಳಿಗೆ ವಿದ್ಯೆಯ ಮಹತ್ವ, ಗುರುವಿನ ಅಗತ್ಯತೆಯ ಬಗ್ಗೆ ತಿಳಿಹೇಳುತ್ತಿರುತ್ತಾರೆ. ಶಾಲಾಕಾಲೇಜಿನ ದಿನಗಳು ಮುಗಿದ ಮೇಲೆ ವಿದ್ಯಾರ್ಥಿ/ನಿಯರು ಶಿಕ್ಷಕರನ್ನು ಮರೆಯುವುದು ಸಹಜ.
ದೇಶಕ್ಕೆ ಉತ್ತಮ ನಾಗರಿಕರನ್ನು ರೂಪಿಸಿಕೊಡುವಲ್ಲಿ ಗುರುವಿನ ಪಾತ್ರ ಮಹತ್ವ ಅನನ್ಯವಾಗಿದೆ. ನಮ್ಮಲ್ಲಿರುವ ಅಜ್ಞಾನದಿಂದ ಹೊರಗೆ ಹಾಕಲು ಶಿಕ್ಷಕರು ಮಾರ್ಗದರ್ಶಿಯಾಗುತ್ತಾರೆ. ಗುರು ಎಂಬ ಶಬ್ದದ ಅರ್ಥವೂ ಇದನ್ನೇ ಹೇಳುತ್ತದೆ. ಅಂಧಃಕಾರವನ್ನು ದೂರಾಗಿಸುವವನು ಎಂದು. ಪ್ರತಿಯೊಬ್ಬರ ಜೀವನದ ಏಳು-ಬೀಳಿಗೆ ಗುರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಕಾರಣನಾಗುತ್ತಾನೆ. ಏಕೆಂದರೆ ಒಬ್ಬ ಶಿಕ್ಷಕನು ನಮ್ಮಲ್ಲಿರುವ ಪ್ರಜ್ಞೆಯನ್ನು ಜಾಗೃತಗೊಳಿಸುವ ಶಕ್ತಿಯಾಗಿರುತ್ತಾನೆ. ಶಿಕ್ಷಕರ ದಿನಾಚರಣೆ ನಿಮಿತ್ತ 'ನಮ್ಮ ಬದುಕಿನಲ್ಲಿ ಶಿಕ್ಷಕರ ಮಹತ್ವ' ಎಂಬ ವಿಷಯದ ಮೇಲೆ ಈ ಲೇಖನ ಕೇಂದ್ರಿಕೃತವಾಗಿದೆ 'ವಿದ್ಯೆಯಂ ಕಲಿಸಿದಾತಂ ಗುರು' ಎನ್ನುವಾಗ ಜ್ಞಾನ ಬೋಧನೆ ಯಾರಿಂದಾದರೂ ಅದನ್ನು ಸ್ವೀಕರಿಸುವ ಮನೋಭಾವ ಎಲ್ಲರಲ್ಲೂ ಇದ್ದರೆ ಒಳಿತು. ಶಂಕರಾಚಾರ್ಯರಿಗೆ ಒಮ್ಮೆ ಚಂಡಾಲನೋರ್ವನಿಂದ ಉಪದೇಶವಾಯಿತಂತೆ ಚಂಡಾಲನು ಮಾತುಗಳನ್ನು ನಾನೇಕೆ ಕೇಳಬೇಕು ಎಂದು ಶಂಕರರು ನಿರ್ಧರಿಸಬಹುದಾಗಿತ್ತು. ಆದರೆ ಚಂಡಾಲನ ಮಾತುಗಳನ್ನು ಆಲಿಸುವ ವ್ಯವಧಾನ ಹಾಗೂ ಪರರ ಬಗ್ಗೆ ಗೌರವ ನೀಡುವ ಸಂಸ್ಕಾರವಿತ್ತು ಅವರಲ್ಲಿ. ಹೌದು, ಇಂದು ನಮ್ಮಲ್ಲಿ ಕಮ್ಮಿಯಾಗಿರುವುದು ಇದೇ. ಗುರುಗಳ ಮಾತನ್ನು ಆಲಿಸದ ವಿದ್ಯಾರ್ಥಿವೃಂದ. ತಾನು ಹೇಳಿದ್ದೇ ಸರಿಯೆಂಬ ಗರ್ವದಿ ಮೆರೆವ ಕೆಲ ಶಿಕ್ಷಕರು. ಶಿಕ್ಷಕ ಹಾಗೂ ವಿದ್ಯಾರ್ಥಿಗಳ ನಡುವೆ ಪರಸ್ಪರ ಗೌರವ ಕಡಿಮೆಯಾಗಿದೆ ಎಂದರೆ ಅದರಲ್ಲಿ ಅತಿಶಯೋಕ್ತಿ ಇಲ್ಲವೆನ್ನಿಸುತ್ತದೆ. ಶಿಷ್ಯಂದಿರು ಗುರು ಹೇಳಿಕೊಟ್ಟದ್ದನ್ನು ಸರಿಯಾಗಿ ಆಲಿಸಿ, ನಂತರ ಅದನ್ನು ಮನನ ಮಾಡಿ ಅದರ ಸಾರವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯೋಗ್ಯವಾದ ಗುರುವನ್ನು ಆರಿಸುವ ಹಕ್ಕು ಶಿಷ್ಯನಿಗೆ ಇರುತ್ತದೆಯಾದರೂ ಗುರುಗಳಲ್ಲಿ ಶ್ರೇಷ್ಠ, ಕನಿಷ್ಠ ಎಂಬ ಭೇದ ಸಲ್ಲದು. ಬೇಕಾದ ಗುರುವನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ಶಿಷ್ಯನಿಗಿರುತ್ತದೆ. ಶಿಷ್ಯ ಗುರುವನ್ನು ಬದಲಿಸಬಹುದು ಆದರೆ, ಗುರು ತನ್ನ ನೆಚ್ಚಿನ ಶಿಷ್ಯನನ್ನು ಬದಲಿಸುವ ಆಯ್ಕೆಯೇ ಇಲ್ಲ.
ಸದಾ ಕಾಲ ನನ್ನ ತಪ್ಪು ತಿದ್ದಿ, ನನ್ನಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ, ಶಾಲಾ ದಿನಗಳಲ್ಲಿ ಗುರುಗಳು ಕಲಿಸಿದ ಪಾಠಗಳು ನನಗೆ ಶಾಲಾ ಮಟ್ಟದಲ್ಲಷ್ಟೇ ಅಲ್ಲದೆ ನನ್ನ ಜೀವನದಲ್ಲಿ ಅಭಿವೃದ್ಧಿ ಕಾಣಲು ಕಾರಣವಾಗಿದೆ. ನನ್ನ ಎಲ್ಲಾ ಗುರುಗಳಿಗೆ ಅನಂತಾನಂತ ವಂದನೆಗಳು...🙏🏼🙏🏼
#ಜೈ_ಹಿಂದ್ 🇮🇳

Comments