ಶ್ರೀ_ಆದಿ_ಶಂಕರಾಚಾರ್ಯರ_ಜಯಂತಿಯ_ಶುಭಾಶಯಗಳು..😍💐🙏
ಭಾರತದಲ್ಲಿ ಹಿಂದೂ ಧರ್ಮವು ಸಂಕಷ್ಟದಲ್ಲಿದ್ದ ಎಂಟನೇ ಶತಮಾನದ ಕಾಲಘಟ್ಟದಲ್ಲಿ, ಹಿಂದೂಗಳಲ್ಲಿದ್ದ ಜಾತಿ ಪದ್ದತಿ, ಮೂಢ ಆಚರಣೆಗಳ ಬಗ್ಗೆ ಆಗ ಪ್ರಬಲರಾಗಿದ್ದ ಬೌದ್ದ ಸನ್ಯಾಸಿಗಳು ಸಾಕಷ್ಟು ನಿಂದನೆಗಳನ್ನು ಮಾಡುತ್ತಿದ್ದ ಕಾಲದಲ್ಲಿ ಹಿಂದೂ ಧರ್ಮೀಯರಲ್ಲಿ ಮತ್ತೆ ಆತ್ಮವಿಶ್ವಾಸ ಹುಟ್ಟಿಸಿ ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿ ತಮ್ಮ ಅದ್ವೈತ ತತ್ವದ ಮೂಲಕ ಧರ್ಮ ಜಾಗೃತಿಯನ್ನುಂಟುಮಾಡಿ ಹಿಂದೂ ಧರ್ಮವನ್ನು ಪುನರುತ್ತಾನಗೊಳಿಸಿದವರು ಶ್ರೀ ಶಂಕರಾಚಾರ್ಯರು. ತಾವು ಬದುಕಿದ್ದು ಕೇವಲ 32 ವರ್ಷಗಳಷ್ಟೇ ಆದರೂ ಆದಿ ಶಂಕರರು ತಾವು ಮಾಡಿದ ಕಾರ್ಯ, ಗಳಿಸಿದ ಕೀರ್ತಿ , ಅಪಾರವಾದುದು. ಶ್ರೀಮದ್ಭಗವದ್ಗೀತೆ, ಉಪನಿಷತ್ತುಗಳು, ಬ್ರಹ್ಮಸೂತ್ರಗಳಿಗೆ ಭಾಷ್ಪಗಳನ್ನು ಬರೆದ ಮೊದಲಿಗರು ಶ್ರೀಶಂಕರಾಚಾರ್ಯರು. ಶಂಕರಾಚಾರ್ಯರು ಭಾರತೀಯ ವೈಚಾರಿಕ ರಂಗದಲ್ಲಿ ಕ್ರಾಂತಿಯನ್ನೇ ಮಾಡಿದ್ದವರು. ಇವರು ಯಾವೊಂದು ಹೊಸತಾದ ಮತ, ಪಂಥಗಳನ್ನು ಸ್ಥಾಪಿಸಿಲ್ಲವಾದರೂ ಹಿಂದೂ ಧರ್ಮದಲ್ಲಿನ ವೇದಸಂಪ್ರದಾಯವನ್ನೇ ಎತ್ತಿಹಿಡಿದರು. ವೇದಗಳಲ್ಲಿನ ಸತ್ವವನ್ನೂ, ಸಾರವನ್ನು ತಮ್ಮದೇ ಆದ ನೆಲೆಯಲ್ಲಿ ನಿಷ್ಕರ್ಷಿಸುವ ಮೂಲಕ ಜಗತ್ತಿಗೆ ಪ್ರಕಾಶಪಡಿಸಿದವರು ಆಚಾರ್ಯ ಶಂಕರರು ಎಂದರೆ ತಪ್ಪಾಗಲಾರದು. ಅದು ಎಂಟು-ಒಂಭತ್ತನೇ ಶತಮಾನಗಳ ಮಧ್ಯದ ಅವಧಿ. ಭಾರತ ದಕ್ಷಿಣ ಸಮುದ್ರ ತೀರದ ಕೇರಳ ರಾಜ್ಯದ ಕಾಲಟಿ ಎಂಬೊಂದು ಸಣ್ಣ ಹಳ್ಳಿ. ಆ ಹಳ್ಳಿಯಲ್ಲಿ ಶಿವಗುರು ಹಾಗೂ ಆರ್ಯಾಂಬರೆನ್ನುವ ಬಡ ಬ್ರಾಹ್...